ಕೊನೆಗೂ ಬೆಂಗಳೂರು vs ಕೊಲ್ಕತ್ತಾ ಪಂದ್ಯ ಮುಂದೂಡಿಕೆ, ಕಾರಣ ಬಹಿರಂಗಪಡಿಸಿದ ಬಿಸಿಸಿಐ…

ಸ್ನೇಹಿತರೆ ಐಪಿಎಲ್ ಸೀಸನ್ 14ರ ಆವೃತ್ತಿಯ 30ನೇ ಪಂದ್ಯದಲ್ಲಿ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಇಂದು ಅಂದರೆ ಸೋಮವಾರ 3ರಂದು ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ವೀಕ್ಷಿಸಲು ಅಭಿಮಾನಿ ಬಳಗ ಕಾತುರರಾಗಿದ್ದರು. ಇನ್ನು ಬೆಂಗಳೂರು ತಂಡದ ಅಭಿಮಾನಿಗಳು ಕಳೆದ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಸೋತು ಮಂಕಾಗಿದ್ದ ಆರ್ಸಿಬಿ ತಂಡ ಮತ್ತೆ ಗೆಲುವಿನ ಹಾದಿಗೆ ಮರಳಲಿದೆ ಎಂದು ವಿಶ್ವಾಸದಲ್ಲಿದ್ದರು.

ಆದರೆ ಕ್ರೀಡಾಭಿಮಾನಿಗಳಿಗೆ ಬೆಂಗಳೂರು ಮತ್ತು ಕೊಲ್ಕತ್ತಾ ಪಂದ್ಯದ ಕುರಿತಾದ ಬೇಸರದ ಸುದ್ದಿಯೊಂದು ಹೊರ ಬಿದ್ದಿದ್ದು ಸೋಮವಾರ ನಡೆಯಬೇಕಾಗಿದ್ದ ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯ ರದ್ದಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರರಾದ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಇಬ್ಬರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಇಂದಿನ ಪಂದ್ಯ ರದ್ದಾಗಲು ಕಾರಣ ಎಂದು ತಿಳಿದುಬಂದಿದೆ.

ಇನ್ನು ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್ ಇಬ್ಬರಿಗೂ ಸೋಂಕು ದೃಢಪಟ್ಟಿದ್ದು, ಕೊಲ್ಕತ್ತಾ ತಂಡದ ಇತರ ಸದಸ್ಯರಿಗೆ ಕೊರೊನಾ ಸೋಂಕು ನೆಗೆಟಿವ್ ಎಂದು ವರದಿ ಬಂದಿದೆ. ಆದರೆ ತಂಡದ ಪ್ಯಾಟ್ ಕಮಿನ್ಸ್ ಸೇರಿದಂತೆ ಕೆಲ ಆಟಗಾರರಿಗೆ ಅನಾರೋಗ್ಯ ಉಂಟಾಗಿರುವ ಕಾರಣದಿಂದ ಅವರನ್ನು ಐಸೋಲೇಷನ್ ಮಾಡಲಾಗಿದ್ದು ಅವರು ಪಂದ್ಯವನ್ನಾಡಲು ಅಲಭ್ಯವಾಗಿರುವ ಕಾರಣ ಪಂದ್ಯವನ್ನು ಮುಂದೂಡಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.